Breaking News

test

ಬಿಗ್ ನ್ಯೂಸ್: 'ಪೌರತ್ವ' ಕಾಯ್ದೆ ಜಾರಿಗೊಳಿಸಲ್ಲ ಎಂದ ವಿವಿಧ ರಾಜ್ಯಗಳ ಸಿಎಂಗಳಿಗೆ ಮೋದಿ, ಅಮಿತ್ ಶಾ ಬಿಗ್ ಶಾಕ್

ಬಿಗ್ ನ್ಯೂಸ್: 'ಪೌರತ್ವ' ಕಾಯ್ದೆ ಜಾರಿಗೊಳಿಸಲ್ಲ ಎಂದ ವಿವಿಧ ರಾಜ್ಯಗಳ ಸಿಎಂಗಳಿಗೆ ಮೋದಿ, ಅಮಿತ್ ಶಾ ಬಿಗ್ ಶಾಕ್

ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ದೇಶದ ಅನೇಕ ಭಾಗದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಫೈರಿಂಗ್ ನಲ್ಲಿ ಅನೇಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯ ಜನ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದೇ ವೇಳೆ ಅನೇಕ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಿಡುವುದಿಲ್ಲ ಎಂದು ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್ ಕುಮಾರ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಪಂಜಾಬ್, ಮಧ್ಯಪ್ರದೇಶ, ಚತ್ತಿಸ್ ಗಢದಲ್ಲಿ ಆಡಳಿತರೂಢ ಸರ್ಕಾರಗಳು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಮ್ಮ ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿವೆ.
ಆದರೆ, ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಸರ್ಕಾರ, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸುವುದು ಕೇಂದ್ರದ ವಿಷಯವಾಗಿದ್ದು ಅದನ್ನು ಆನ್ಲೈನ್ ಮೂಲಕ ಅನುಷ್ಠಾನಗೊಳಿಸುವುದಾಗಿ ಹೇಳಿದೆ.
ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗುವುದು. ಈ ಕಾಯ್ದೆ ಜಾರಿ ವಿಚಾರದಲ್ಲಿ ಪ್ರಾದೇಶಿಕ ನೋಂದಣಿ ಕಚೇರಿಗಳು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ಅಗತ್ಯಬಿದ್ದರೆ ರಾಜ್ಯದ ಸಂಪನ್ಮೂಲ ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.
ಸಂವಿಧಾನದ 7ನೇ ಶೆಡ್ಯೂಲ್ ಪ್ರಕಾರ ಪೌರತ್ವ ತಿದ್ದುಪಡಿ ಮಸೂದೆ ಜಾರಿಗೊಳಿಸಿದ್ದು ಇದು ಕೇಂದ್ರ ಪಟ್ಟಿಯಲ್ಲಿ ಇರುವುದರಿಂದ ತಡೆಯುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇರುವುದಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.
ಸಂವಿಧಾನದ 7ನೇ ಶೆಡ್ಯೂಲ್ ಪ್ರಕಾರ ಕೇಂದ್ರ ಸರ್ಕಾರದ ಕಾಯ್ದೆಯನ್ನು ಶಾಸನ ಮಾಡಿದ ಬಳಿಕ ಅದನ್ನು ತಿರಸ್ಕರಿಸುವ ಯಾವುದೇ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇರುವುದಿಲ್ಲ. ಯಾವುದೇ ವ್ಯಕ್ತಿಗೆ ಪೌರತ್ವ ನೀಡುವುದು ಕೇಂದ್ರ ಸರ್ಕಾರದ ವಿಶೇಷ ಅಧಿಕಾರವಾಗಿದೆ. ಈ ಹಿನ್ನೆಲೆಯಲ್ಲಿ ತೀವ್ರ ವಿರೋಧದ ನಡುವೆಯೂ ಪೌರತ್ವ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.

ಬಿಗ್ ನ್ಯೂಸ್: 'ಪೌರತ್ವ' ಕಾಯ್ದೆ ಜಾರಿಗೊಳಿಸಲ್ಲ ಎಂದ ವಿವಿಧ ರಾಜ್ಯಗಳ ಸಿಎಂಗಳಿಗೆ ಮೋದಿ, ಅಮಿತ್ ಶಾ ಬಿಗ್ ಶಾಕ್ ಬಿಗ್ ನ್ಯೂಸ್: 'ಪೌರತ್ವ' ಕಾಯ್ದೆ ಜಾರಿಗೊಳಿಸಲ್ಲ ಎಂದ ವಿವಿಧ ರಾಜ್ಯಗಳ ಸಿಎಂಗಳಿಗೆ ಮೋದಿ, ಅಮಿತ್ ಶಾ ಬಿಗ್ ಶಾಕ್ Reviewed by Space encyclopaedia on December 20, 2019 Rating: 5

No comments:

Powered by Blogger.