ರೈತರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ʼಗುಡ್ ನ್ಯೂಸ್
ರಾಜ್ಯ ಸರ್ಕಾರ ರೈತರ ಸಂಕಷ್ಟಗಳಿಗೆ ಸ್ಪಂದಿಸಲು ಬದ್ಧವಾಗಿದೆ. ಜನವರಿ 1 ರಿಂದ ಭತ್ತ ಸೇರಿದಂತೆ ಅನೇಕ ಕೃಷಿ ಉತ್ಪನ್ನಗಳನ್ನು ಖರೀದಿಸಲು ಖರೀದಿ ಕೇಂದ್ರ ಆರಂಭಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾಹಿತಿ ನೀಡಿದ್ದಾರೆ.
ರಾಯಚೂರು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಿದ್ದ ಕೃಷಿ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಜನವರಿ 1 ರಿಂದ ಭತ್ತ ಸೇರಿ ಬೆಲೆ ಕುಸಿತವಾದ ಕೃಷಿ ಉತ್ಪನ್ನಗಳ ಖರೀದಿಗೆ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಸ್ವಾಮಿನಾಥನ್ ವರದಿ ಅನುಷ್ಠಾನ ಭಾಗವಾಗಿ ಕೇಂದ್ರ ಸರ್ಕಾರದಿಂದ 23 ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಲಾಗಿದೆ. ರಾಜ್ಯ ಸರ್ಕಾರದಿಂದಲೂ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಭತ್ತ ಮತ್ತು ಕಬ್ಬು ಬೆಳೆಯುವ ಪ್ರದೇಶದ ಭೂಮಿ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ರೈತರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ʼಗುಡ್ ನ್ಯೂಸ್ʼ
Reviewed by Space encyclopaedia
on
December 15, 2019
Rating:
Reviewed by Space encyclopaedia
on
December 15, 2019
Rating:

No comments: