ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಅಗತ್ಯಬಿದ್ದರೆ ಬದಲಾವಣೆಗೆ ಸಿದ್ದ
ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಗೆ ಹಲವು ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆಗಳು ಹಿಂಸಾತ್ಮಕ ರೂಪಕ್ಕೆ ತಿರುಗಿ ಸಾಕಷ್ಟು ವಿವಾದ ಸೃಷ್ಟಿಯಾಗಿದೆ. ಇದರಿಂದ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯಿದೆಯಲ್ಲಿ ಅಗತ್ಯಬಿದ್ದಲ್ಲಿ ಕೆಲವು ಬದಲಾವಣೆ ಮಾಡಲು ಚಿಂತನೆ ನಡೆಸಿದೆ. ಈ ಕುರಿತು ಗೃಹ ಸಚಿವ ಅಮಿತ್ ಶಾ ಅವರೇ ಸುಳಿವು ನೀಡಿದ್ದಾರೆ.
ಇಂದು ಮೇಘಾಲಯದಲ್ಲಿ ಮಾತನಾಡಿದ ಅಮಿತ್ ಶಾ, ಪೌರತ್ವ ಕಾಯಿದೆಯಲ್ಲಿ ಅಗತ್ಯ ಬಿದ್ದರೆ ಕೆಲವೊಂದು ಬದಲಾವಣೆಗಳನ್ನು ಮಾಡಲು ಸಿದ್ದ ಎಂದು ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ ಪೌರತ್ವ ತಿದ್ದುಪಡಿ ಕಾಯಿದೆಗೆ ಈಶಾನ್ಯ ರಾಜ್ಯಗಳಾದ ಅಸ್ಸಾಂ, ತ್ರಿಪುರಾ, ಮೇಘಾಲಯ ರಾಜ್ಯಗಳಲ್ಲಿ ಪ್ರತಿಭಟನೆ ತಾರಕಕ್ಕೇರಿದೆ.
ಇದೇ ವೇಳೆ, ಪಶ್ಚಿಮ ಬಂಗಾಳದಲ್ಲೂ ಪ್ರತಿಭಟನೆ ಹಿಂಸಾರೂಪ ಪಡೆದಿದ್ದು, ಕಾಂಗ್ರೆಸ್, ಎಡಪಕ್ಷಗಳು ಸೇರಿದಂತೆ ಪ್ರಮುಖ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಇನ್ನು ಪ್ರತಿಭಟನೆ ನಡೆಯುತ್ತಿರುವ ರಾಜ್ಯಗಳಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದ್ದು, ಪೊಲೀಸರ ಗುಂಡೇಟಿಗೆ ಅಸ್ಸಾಂನಲ್ಲಿ ಐದು ಜನರು ಬಲಿಯಾಗಿದ್ದಾರೆ. ಮುಂಜಾಗರೂಕತಾ ಕ್ರಮವಾಗಿ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಸೇನೆಯನ್ನು ನಿಯೋಜನೆ ಮಾಡಲಾಗಿದೆ….
ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಅಗತ್ಯಬಿದ್ದರೆ ಬದಲಾವಣೆಗೆ ಸಿದ್ದ : ಅಮಿತ್ ಶಾ
Reviewed by Space encyclopaedia
on
December 15, 2019
Rating:
Reviewed by Space encyclopaedia
on
December 15, 2019
Rating:

No comments: