Breaking News

test

ಎನ್‌ಆರ್‌ಸಿ, ಸಿಎಎ ಆಯ್ತು ಮೋದಿ ಸರ್ಕಾರದ ಮುಂದಿನ ಟಾರ್ಗೆಟ್ ಏನು ಗೊತ್ತೇ..?

ಎನ್‌ಆರ್‌ಸಿ, ಸಿಎಎ ಆಯ್ತು ಮೋದಿ ಸರ್ಕಾರದ ಮುಂದಿನ ಟಾರ್ಗೆಟ್ ಏನು ಗೊತ್ತೇ..?
ನವದೆಹಲಿ : ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇದೀಗ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್ ಪಿಆರ್) ಜಾರಿಗೊಳಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.
ಮಂಗಳವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಎನ್ ಪಿಆರ್ ಬಗ್ಗೆ ಗಹನ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಸಂಪುಟದಲ್ಲಿ ಎನ್ ಪಿಆರ್ ಗೆ ಒಪ್ಪಿಗೆ ದೊರೆತರೆ 2020 ಏಪ್ರಿಲ್ 1 ರಿಂದ ಸೆಪ್ಟೆಂಬರ್ 20ರ ವರೆಗೆ ಕೈಗೊಳ್ಳುವ ನಿರೀಕ್ಷೆ ಇದೆ ಎನ್ನಲಾಗಿದೆ.
ದೇಶದ ಪ್ರತಿ ಮನೆಗೂ ಗಣತಿದಾರರು ಬಂದು ಜನಸಂಖ್ಯೆ ನೋಂದಣಿ ಮಾಡಲಿದ್ದಾರೆ. ಈ ಕಾರ್ಯಕ್ಕೆ ಬಯೋಮೆಟ್ರಿಕ್ ಸಾಧನ ಬಳಸಿ ದೇಶದ ನಿವಾಸಿಗಳ ಗುರುತಿನ ದತ್ತಾಂಶ ಸಂಗ್ರಹಿಸಲಾಗುತ್ತದೆ.
ದೇಶದ ಯಾವುದೇ ಪ್ರದೇಶದಲ್ಲಿ 6 ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಅವಧಿ ವಾಸವಾಗಿರುವವರು ರಾಷ್ಟ್ರೀಯ ಜನಸಂಖ್ಯಾ ನೋಂದಣಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಬೇಕಾಗುತ್ತದೆ.

ಎನ್‌ಆರ್‌ಸಿ, ಸಿಎಎ ಆಯ್ತು ಮೋದಿ ಸರ್ಕಾರದ ಮುಂದಿನ ಟಾರ್ಗೆಟ್ ಏನು ಗೊತ್ತೇ..? ಎನ್‌ಆರ್‌ಸಿ, ಸಿಎಎ ಆಯ್ತು ಮೋದಿ ಸರ್ಕಾರದ ಮುಂದಿನ ಟಾರ್ಗೆಟ್ ಏನು ಗೊತ್ತೇ..? Reviewed by Space encyclopaedia on December 21, 2019 Rating: 5

No comments:

Powered by Blogger.