Breaking News

test

ಮಕ್ಕಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 'ಬಂಪರ್' ಗಿಫ್ಟ್








ಮಕ್ಕಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 'ಬಂಪರ್' ಗಿಫ್ಟ್.
ಮಕ್ಕಳ ಶ್ರೇಯೋಭಿವೃದ್ಧಿಗೆ ಬಂಪರ್ ಗಿಫ್ಟ್ ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಿಂತನೆ ನಡೆಸಿದ್ದು ಇದೇ ಮೊದಲ ಬಾರಿಗೆ ಮಕ್ಕಳ ಬಜೆಟ್ ಮಂಡನೆ ಮುಂದಾಗಿದ್ದಾರೆ.
ಮಕ್ಕಳ ಕೇಂದ್ರಿತ ಬಜೆಟ್ ಮಂಡಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿಂದೆ ಕೃಷಿ ಮತ್ತು ಮಹಿಳಾ ಬಜೆಟ್ ಮಂಡಿಸಲಾಗಿತ್ತು. ಈಗ ಮಕ್ಕಳ ಬಜೆಟ್ ಮಂಡಿಸಲು ಚಿಂತನೆ ನಡೆಸಲಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆ, ಸುರಕ್ಷತೆ, ಸೈಕಲ್, ಸಮವಸ್ತ್ರ, ಪಠ್ಯಪುಸ್ತಕ, ಶಿಕ್ಷಣ ಹೀಗೆ ಮಕ್ಕಳ ಕೇಂದ್ರಿತ ಬಜೆಟ್ ಮಂಡನೆಗೆ ಕ್ರಮಕೈಗೊಳ್ಳಲಾಗಿದೆ.
ಇದಕ್ಕಾಗಿ ಪ್ರಸ್ತಾವನೆ ಸಲ್ಲಿಸಲು ನಾನಾ ಇಲಾಖೆಗಳಿಗೆ ಸೂಚಿಸಿದ್ದು, ಸಂಘ-ಸಂಸ್ಥೆಗಳಿಂದ ಸಲಹೆ ಪಡೆಯಲಾಗುತ್ತಿದೆ. ಮಕ್ಕಳ ಶ್ರೇಯೋಭಿವೃದ್ಧಿಗೆ ಮೀಸಲಿಟ್ಟ ಅನುದಾನ ಸದ್ಭಳಕೆಗೆ ಇದರಿಂದ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.

ಮಕ್ಕಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 'ಬಂಪರ್' ಗಿಫ್ಟ್ ಮಕ್ಕಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 'ಬಂಪರ್' ಗಿಫ್ಟ್ Reviewed by Space encyclopaedia on December 15, 2019 Rating: 5

No comments:

Powered by Blogger.